Tuesday

ಶರ್ಮಾಜಿ" ಠೀವಿ ಹೋಯ್ತು ! ಜೋತಿಶಿಗೆಶನಿಗ್ರಹ ಪೀಡೆ

ಮತ್ತೊಂದು ಸಂತಸದ ವಿಷಯ. ಜೀ ಟಿವಿಯ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದಿಂದ ನರೇಂದ್ರ ಶರ್ಮ ಅವರನ್ನು ತೊಲಗಿಸಲಾಗಿದೆ. ಇದು ನಮಗೆ ಗೊತ್ತಾಗಿರುವ ಮಾಹಿತಿ. ಜೀ ಟಿವಿಗೆ ಒಂದು ಥ್ಯಾಂಕ್ಸ್ ಹಾಗು ಜಗನ್ಮಾತೆಗೆ ಕೋಟಿ ವಂದನೆ. ಬಾಯಿಬಡುಕ ನರೇಂದ್ರ ಶರ್ಮನನ್ನು ತೊಲಗಿಸಿ ಎಂದು ನಾವೆಲ್ಲರೂ ಆರಂಭಿಸಿದ ಕಪಟ ಜ್ಯೋತಿಷಿಗಳ ವಿರುದ್ಧ ಕರ್ನಾಟಕ ಅಭಿಯಾನ ಕಡೆಗೂ ಯಶಸ್ವಿಯಾಗಿದೆ. ಜೀ ಟಿವಿ ಮುಖ್ಯಸ್ಥರಿಗೆ ಸಾವಿರಾರು ಪತ್ರಗಳನ್ನು ಬರೆದು ಈ ಕೊಳಕು ಕಾರ್ಯಕ್ರಮವನ್ನು ನಿಲ್ಲಿಸುವಂತೆ ಕೋರಿದ ಎಲ್ಲರ ಶ್ರಮವೂ ಸಾರ್ಥಕಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು.

ನರೇಂದ್ರ ಶರ್ಮ ಅನಾಮತ್ತಾಗಿ ಮೂರು ಚಾನಲ್‌ಗಳನ್ನು ಸುತ್ತಾಡಿ ಮುಗಿಸಿಯಾಗಿದೆ. ಕಸ್ತೂರಿ, ಸುವರ್ಣ ಹಾಗು ಜೀ ಟಿವಿಗಳ ಪ್ರಯಾಣ ಮುಗಿದಾಗಿದೆ. ಮುಂದೆ ಆತ ಇನ್ನ್ಯಾವ ಚಾನಲ್ ಹಿಡಿಯುತ್ತಾರೋ ಕಾದು ನೋಡಬೇಕು. ಆದರೆ ಈತನ ವಿರುದ್ಧ ಎದ್ದಿರುವ ಆಕ್ರೋಶವನ್ನು ಗಮನಿಸಿರುವ ಇತರ ಚಾನಲ್‌ಗಳು ಈ ಸೆರಗಿನ ಕೆಂಡವನ್ನು ಕಟ್ಟಿಕೊಂಡರೆ ಎದುರಿಸುವ ಅಪಾಯಗಳನ್ನು ಈಗಾಗಲೇ ಊಹಿಸಿರಬಹುದು. ಇನ್ನುಳಿದದ್ದು ಅವರಿಗೆ ಸೇರಿದ್ದು. (ಸಂಪಾದಕೀಯ)

No comments: